ಮಂಗಳೂರು : ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯ ಕಾರಣ ನೀಡಿ ಬೆಂಗಳೂರಿನಲ್ಲಿ ಹೋಟೆಲ್, ರೆಸ್ಟೋರೆಂಟ್ಗಳ ಆಹಾರ ಬೆಲೆಯನ್ನು ಇತ್ತೀಚೆಗಷ್ಟೇ ಹೆಚ್ಚಳ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಮಂಗಳೂರು ನಗರದ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಆಹಾರ ಮತ್ತು ಪಾನೀಯಗಳ ಬೆಲೆಯನ್ನು ಶೇ 10 ರಷ್ಟು ಹೆಚ್ಚಿಸಿವೆ. ಗ್ಯಾಸ್, ಬಾಡಿಗೆ ಮತ್ತು ವಿದ್ಯುತ್ ಬೆಲೆ ಏರಿಕೆಯಿಂದಾಗಿ ಜಿಲ್ಲೆಯ ಇತರ ಪಟ್ಟಣಗಳ ಹೋಟೆಲ್ಗಳೂ ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳ ದರ ಹೆಚ್ಚಳ ಮಾಡುವ