ಗದಗ: ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಜಾರಿಗೊಳಿಸಿತ್ತು. ಈ ನೀತಿ ಸಂಹಿತೆ ಜಾರಿಯಾದ ಬಳಿಕವೇ ಸಚಿವರ ಸ್ವಜಾತಿಯ ಅಧಿಕಾರಿಯಾದ ಗದಗ ಜಿಲ್ಲಾ ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ ಅವರು ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಅನಿಲ ಮೆಣಸಿನಕಾಯಿ ದೂರು ನೀಡಿದ್ದರು.