ಚಾಮರಾಜನಗರ: ಮತಯಾಚಿಸಲು ಹೋದ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ನಡೆದಿದೆ. ಗೀತಾ ಮಹದೇವಪ್ರಸಾದ್, ಗುಂಡ್ಲುಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಈ ಕ್ಷೇತ್ರ ವ್ಯಾಪ್ತಿಯ ಹಿರಿಕಾಟಿ ಗ್ರಾಮಕ್ಕೆ ತಮ್ಮ ಪಕ್ಷದ ಮುಖಂಡರೊಂದಿಗೆ ಮತಯಾಚನೆಗೆ ಹೋದ ಸಂದರ್ಭದಲ್ಲಿ ಸಚಿವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿಗಳ ಕೊರತೆ ಇದೆ. ಗ್ರಾಮದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ರಸ್ತೆಗಳು