ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು(ಜೂನ್ 28) ಬೆಳಗ್ಗೆ 11 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಗೃಹಲಕ್ಷ್ಮೀ , ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ಗಂಭೀರ ಸಮಾಲೋಚನೆ ನಡೆಯಲಿದೆ. ಇನ್ನು ಮುಖ್ಯವಾಗಿ ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್ ಸಿಗುವ ಸಾಧ್ಯತೆ ಇದೆ.ಅರ್ಜಿ ಯಾವಾಗ ಹಾಕುವುದು ಎಂದು ಚಿಂತೆ ಮಾಡುತ್ತಿದ್ದ ಮಹಿಳೆಯರಿಗೆ ಇಂದಿನ