ಸ್ಪರ್ಧಾರ್ಥಿಗಳಿಗೆ ಗುಡ್ ನ್ಯೂಸ್!

ಕಲಬುರಗಿ| Ramya kosira| Last Modified ಭಾನುವಾರ, 21 ನವೆಂಬರ್ 2021 (12:47 IST)ಕಲಬುರಗಿ : ರಾಜ್ಯದಲ್ಲಿ 12 ಸಾವಿರ ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಪ್ರತಿ ವರ್ಷ 4 ಸಾವಿರ ಪೊಲೀಸರ ನೇಮಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಮೂರು ವರ್ಷಗಳ ಹಿಂದೆ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಭರ್ತಿ ಮಾಡಿಕೊಳ್ಳುತ್ತಿದ್ದರಿಂದ ಈಗ ಖಾಲಿ ಹುದ್ದೆಗಳ ಸಂಖ್ಯೆ12 ಸಾವಿರಕ್ಕೆ ಇಳಿದಿದೆ ಎಂದರು. ರಾಜ್ಯದಲ್ಲಿ ಈಗ 970 ಎಸ್ಐಗಳ ಹುದ್ದೆ ಭರ್ತಿಯಾಗುತ್ತಿದ್ದು, ಕಾಲಮಿತಿಯೊಳಗೆ ಎಲ್ಲ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು. ಹೊಸದಾಗಿ 100 ಠಾಣೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ 200 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಹೊಸದಾಗಿ 10 ಸಾವಿರ ಮನೆಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದರು.ಇದರಲ್ಲಿ ಇನ್ನಷ್ಟು ಓದಿ :