ಬೆಂಗಳೂರು(ಆ.07): ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸುವ ಸರ್ಕಾರಿ ಜಾಹೀರಾತುಗಳಲ್ಲಿರುವ ಸ್ಥಳೀಯ ಜನಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತು ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಎಚ್.ಎಂ. ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತು. ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸುವ