ಬೆಂಗಳೂರು : ಸರ್ಕಾರಿ ನೌಕರರು ಇತ್ತಿಚೀನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಒಂದು ಪಕ್ಷದ ಪರ ಅಥವಾ ವಿರೋಧವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಸರ್ಕಾರಿ ನೌಕರರ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಕಡಿವಾಣ ಹಾಕಲು ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕಕರು ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ಪರ ಅಥವಾ ವಿರೋಧವಾಗಿ ಲೇಖನ, ಅಭಿಪ್ರಾಯ, ವೀಡಿಯೋಗಳನ್ನು ಹಂಚಿಕೊಳ್ಳುವುದನ್ನು ಸರ್ಕಾರ ಗಮನಿಸಿದೆ.ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ