ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ಸಿಹಿ ಸುದ್ದಿ ನೀಡಿದರು. ಈ ಮೂಲಕ ಜಿಲ್ಲೆಯ