ಬೆಂಗಳೂರು : ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ 1 ರಿಂದ 5 ನೇ ತರಗತಿಯವರೆಗೆ ಶಾಲೆಗಳನ್ನು ಅಕ್ಟೋಬರ್ 25 ರಿಂದ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಶಾಲೆಗಳ ಆರಂಭಕ್ಕೆ ಸರಕಾರ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದು, ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯವಾಗಿರಬೇಕು ಎಂದು ಸೂಚನೆ ನೀಡಿದೆ. ಶಿಕ್ಷಕರು ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು. ತರಗತಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಶಾಲೆಗೆ ಹಾಜರಾಗುವುದು