ಬೆಂಗಳೂರು : ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ನಾಳೆಯಿಂದ LKG, UKG,ಅಂಗನವಾಡಿ ಆರಂಭ ಮಾಡಲು ಸರ್ಕಾರ ಮುಂದಾಗಿದೆ. ಅಂಗನವಾಡಿಗಳ ಆರಂಭಕ್ಕೆ ಮಾರ್ಗಸೂಚಿ ಹೊರಡಿಸಲಾಗಿದೆ. -ಶಾಲೆಗೆ ಬರುವ ಮಕ್ಕಳು ಪೋಷಕರ ಬಳಿಯಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು. -ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು. -ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. -ಅಂಗನವಾಡಿ ಆರಂಭದ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತರಬೇಕು.