ಪಶ್ಚಿಮ ಬಂಗಾಳದಲ್ಲಿ ಒಂದು ವರ್ಷದವರೆಗೆ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2021ರ ನವೆಂಬರ್ 7ರವರೆಗೆ ಪಶ್ಚಿಮ ಬಂಗಾಳದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಬ್ಯಾನ್ ಆಗಲಿದೆ. ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ