ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು(ಜುಲೈ 04) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನಲ್ಲಿ ಮಾತ್ರ ಸದ್ಯಕ್ಕೆ ರಜೆ ನೀಡಲಾಗಿದ್ದು, ಉಳಿದ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ತಹಶೀಲ್ದಾರ್ ಗಳಿಗೆ ನೀಡಲಾಗಿದೆ.ಹವಾಮಾನ ಇಲಾಖೆಯು