ಬೆಂಗಳೂರು: ಕೇರಳ ಮತ್ತು ಕೊಡಗಿನಲ್ಲಿ ಪ್ರವಾಹ ಉಂಟಾದಾಗ ಸೆಪ್ಟೆಂಬರ್ ನಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿತ್ತು. ಅಷ್ಟೇ ಅಲ್ಲದೆ, ನಗರದ ಕೆಲವು ಪ್ರದೇಶಗಳನ್ನು ಅಪಾಯಕಾರಿ ಪ್ರದೇಶ ಎಂದು ಬಿಬಿಎಂಪಿ ಗುರುತಿಸಿತ್ತು. ಅದು ನಿಜವಾಗುವ ಭೀತಿ ಇದೀಗ ನಗರದ ಜನರಿಗೆ ಎದುರಾಗಿದೆ.ಕಳೆದ ಎರಡು ದಿನಗಳಿಂದ ನಗರದಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಭಾರೀ ಮಳೆಯಾಗುತ್ತಿದ್ದು ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಭಾರೀ