ಯಾದಗಿರಿ : ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಯಾ ತಹಶೀಲ್ದಾರ್ ಮೂಲಕ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರಮಠಕಲ್ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಇಂದು