ಬೆಂಗಳೂರು : ನಗರದಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಸಿದೆ.ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮಂಡ್ಯ ಜಿಲ್ಲೆ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದೂ ಹೇಳಿದೆ. ಈಗಾಗಲೇ ಮಳೆ ಆವರಿಸಿದ್ದು, ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕಳೆದ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ರಾಜ್ಯದಲ್ಲಿ