ತಮಿಳುನಾಡು ಜಲಾವೃತವಾಗಿದೆ. ಮುಂದಿನ ಐದು ದಿನಗಳು ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ ಕೇರಳದಲ್ಲೂ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಇಂದು ಒಟ್ಟು 6 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನಾಳೆ (ನವೆಂಬರ್ 14) ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಅಂದರೆ ವಿಪರೀತ ಮಳೆಯಾಗುವ ಸೂಚನೆ ಇದಾಗಿದೆ. ಇಂದು ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಆಲಪ್ಪುಳ