ಬೆಂಗಳೂರು : ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಮುಂಗಾರಿಗೂ ಮುನ್ನವೇ ವರುಣನ ಆರ್ಭಟ ಶುರುವಾಗುವ ಲಕ್ಷಣಗಳು ಕಂಡುಬರುತ್ತಿದೆ. ರಾಜ್ಯದಲ್ಲಿ ಇಂದಿನಿಂದ ಮೂರು-ನಾಲ್ಕು ದಿನ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಧಾರಕಾರ ಮಳೆಯ ಎಚ್ಚರಿಕೆಯನ್ನು ಇಲಾಖೆ ನೀಡಿದೆ.