ಬೆಂಗಳೂರು : ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.