ಬೆಂಗಳೂರು : ರಾಜ್ಯದಲ್ಲಿ ನಾಳೆಯವರೆಗೆ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.ಬೆಂಗಳೂರಿನಲ್ಲೂ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗುವ ಸಂಭವ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನಿನ್ನೆ ಯಲ್ಲಾಪುರ ತಾಲೂಕಿನ ಪನಸಗುಳಿಯಲ್ಲಿ ಗಂಗಾವಳಿ ನದಿಯಲ್ಲಿ ಲಾರಿಯೊಂದು ತೇಲಿ ಹೋಗಿದೆ. ಲಾರಿಯಲ್ಲಿದ್ದ ಐವರ ರಕ್ಷಣೆಗೆ ಮೊರೆ