ಬೆಂಗಳೂರು : ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ನಾಲ್ಕೈದು ದಿನಗಳಿಂದ ವಿಶ್ರಾಂತಿ ನೀಡಿದ್ದ, ಮಳೆರಾಯ ಇವತ್ತಿನಿಂದ ಅಬ್ಬರಿಸಲು ಶುರು ಮಾಡಲಿದ್ದಾನೆ. ಇಂದಿನಿಂದ ಆರಂಭವಾಗುವ ಮಳೆ ಅಕ್ಟೋಬರ್ 30ರವೆರೆಗೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತು ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದೆ. ಇಂದು ರಾತ್ರಿಯೇ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಡುವ ಸಾಧ್ಯತೆಗಳಿವೆ.