ಬೆಂಗಳೂರು : ರೈತರ ಜೀವನಾಡಿ ಎಂದೇ ಜನಜನಿತವಾಗಿರುವ ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ. ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ನೀಡಲಾಗಿದೆ.ಮುಂಗಾರು ಮಳೆ ವಾಡಿಕೆಗಿಂತ (ಜೂನ್ 1) ಮೂರು ದಿನ ಮೊದಲೇ ಮುಂಗಾರು ಕೇರಳ ಪ್ರವೇಶಿಸಿದೆ. ಮುಂಗಾರು ಕೇರಳಕ್ಕೆ ಕಾಲಿಟ್ಟನಾಲ್ಕೈದು ದಿನದಲ್ಲಿ ರಾಜ್ಯವನ್ನು ಪ್ರವೇಶಿಸುವುದು ಮಾಮೂಲಿ. ಆದ್ದರಿಂದ ಜೂನ್