ಬೆಂಗಳೂರು : ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಅಕ್ಟೋಬರ್ 25 ಅಥವಾ 26ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮಳೆಯ ಆರ್ಭಟ ಶುರುವಾಗಲಿದೆ. ನಿನ್ನೆ ರಾತ್ರಿಯೂ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಅ. 23ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ. ಕರ್ನಾಟಕದ 16 ಜಿಲ್ಲೆಗಳಲ್ಲಿ ಇನ್ನು 3 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ