ಬೆಂಗಳೂರು(ಸೆ.17) : ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.