ಬೆಂಗಳೂರು(ಅ.07) : ರಾಜ್ಯದಲ್ಲಿ ವರುಣನ ಆರ್ಭಟ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು , ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.