ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ರಣ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಕೊಡಗು, ಉಡುಪಿ, ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹವಾಮಾನ ಇಲಾಖೆ ಮತ್ತೆರಡು ದಿನ ಆರೆಂಜ್ ಅಲರ್ಟ್ ಸೂಚಿಸಿದೆ.ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಮರ, ವಿದ್ಯುತ್ ಕಂಬ ಧರೆಗುರುಳಿದೆ. ಹಲವೆಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದ್ದು, ಮೊಬೈಲ್ ನೆಟ್ವರ್ಕ್ ಸಿಗದಂತಾಗಿದೆ.ಭಾಗಮಂಡಲದ ತ್ರಿವೇಣಿ ಸಂಗಮ ಕಳೆದೆರಡು