ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 8 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ