Karnataka Weather Update: ಹವಾಮಾನ ಇಲಾಖೆ ಕರ್ನಾಟಕದ ರಾಜ್ಯದ ನಾನಾ ಪ್ರದೇಶಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈಗಾಗಲೇ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬರುತ್ತಿಲ್ಲ. ರಾಜಧಾನಿ ಬೆಂಗಳೂರಿನಲ್ಲೂ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಈ ಮಳೆ ಉಂಟಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು