ಬೆಂಗಳೂರು(ಅ.08): ರಾಜ್ಯದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಅಕ್ಟೋಬರ್ 6 ಕ್ಕೆ ಮುಂಗಾರು ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇನ್ನೂ ಅಕ್ಟೋಬರ್ 10ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 10ರ ತನಕ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ. ನೈರುತ್ಯ ಬಂಗಾಳ ಕೊಲ್ಲಿಯಿಂದ ಪೂರ್ವ ಮಧ್ಯ ಅರೇಬಿಯನ್