ಬೆಂಗಳೂರು : ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ವಿನ್, ಸೆಂಟ್ ಜೋಸೆಫ್ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸದ್ದನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಸುತ್ತೋಲೆ ಹೊರಡಿಸಲು ಮುಂದಾಗಿದೆ.ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಖಾಸಗಿ ಶಾಲೆಗಳ ಜೊತೆಗೆ ಮದರಸಾಗಳಲ್ಲೂ ನಿತ್ಯ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರು