ಬೆಂಗಳೂರು : ಇಂದಿನಿಂದ 1 ರಿಂದ 5ನೇ ತರಗತಿವರೆಗಿನ ಶಾಲೆಗಳು 20 ತಿಂಗಳು ಬಳಿಕ ಆರಂಭಗೊಳ್ಳುತ್ತಿವೆ. ಈಗಾಗಲೇ ಕಾಲೇಜು, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಲಸಿಕೆ ಬಂದರೂ ಕೊರೊನಾ ಆತಂಕ ಇನ್ನು ಕಡಿಮೆ ಆಗಿಲ್ಲ. ಕೊರೊನಾ ಹಿನ್ನೆಲೆ ಸರ್ಕಾರ ಸಹ ಎಲ್ಲ ಮುಂಜಾಗ್ರತ ಕ್ರಮಗಳೊಂದಿಗೆ ಶಾಲೆ ಆರಂಭಿಸೋದಾಗಿ ಹೇಳಿದೆ. ಹಾಗಾಗಿ ಭಾನುವಾರವೇ ಶಾಲೆಗಳನ್ನು ಶುಚಿಗೊಳಿಸಲಾಗಿತ್ತು. ಬೇಗ ಮಕ್ಕಳನ್ನ ಶಾಲೆಗೆ ವಾಪಸ್ ಕರೆಸಿಕೊಳ್ಳಬೇಕು.