ಬೆಂಗಳೂರು : ಇಂದು ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನ ಐದು ಕಡೆ ಮತ ಎಣಿಕೆ ಕಾರ್ಯ ನಡೆಯಲಿರುವ ಹಿನ್ನಲೆಯಲ್ಲಿ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಜೊತೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮೆರವಣಿಗೆ, ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದು ನಿಷೇಧಿಸಲಾಗಿದೆ. ಭದ್ರತೆಗಾಗಿ 18 ಸಾವಿರ ಪೊಲೀಸರ ಹಾಗೂ 35,000 ಸಿಆರ್ ಪಿ ಎಫ್ ಸಿಬ್ಬಂದಿಗಳ ನಿಯೋಜನೆ