ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಮೂಲಕ ಬಿಕ್ಕಟ್ಟು ಶಮನಗೊಂಡಿದೆ. ಹೈಕೋರ್ಟ್ ಗ್ರೀನ್ ಸಿಗ್ನಲ್ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ. ಸೆಪ್ಟೆಂಬರ್ 29ಕ್ಕೆ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿ ಕೆಇಎ ಬಿಡುಗಡೆ ಮಾಡಲಿದೆ.ಅಕ್ಟೋಬರ್ 3 ರಿಂದ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ನಾರಾಯಣ್ ತಿಳಿಸಿದ್ದಾರೆ.