ಬೆಂಗಳೂರು : ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲಗೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾವುದೇ ಉತ್ತರ ನೀಡದೇ ಮೌನಕ್ಕೆ ಜಾರಿದ್ದಾರೆ.ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ನಿಮಗೆ ಜ್ವರ ಬಂದಿದೆ, ಅದಕ್ಕೆ ಮೌನ ವಹಿಸಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ, ಏನು ಬೇಕಾದರೂ ಹೇಳಿಕೊಳ್ಳಲಿ ಎಂಬಂತೆ ಕೈ ಸನ್ನೆ ಮೂಲಕವೇ ಪ್ರತಿಕ್ರಿಯಿಸಿ