ಉಡುಪಿಯ ಕಾಲೇಜಿನಲ್ಲಿ ಉಂಟಾಗಿದ್ದ ಹಿಜಾಬ್ ವಿವಾದ ರಾಜ್ಯಾದ್ಯಂತ ಹಬ್ಬುತ್ತಿದ್ದಂತೆ ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಮೊದಲು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಕೆಲ ದಿನ ವಿಚಾರಣೆ ನಡೆಸಿತ್ತಾದರೂ, ಧಾರ್ಮಿಕ ಸೂಕ್ಷ್ಮ ಪ್ರಕರಣವಾದ್ದರಿಂದ ವಿಸ್ತೃತ ಪೀಠ ವಿಚಾರಣೆ ನಡೆಸುವ ಅಗತ್ಯವಿದೆಯೆಂದು ಅಭಿಪ್ರಾಯಪಟ್ಟಿತ್ತು.ಅದರಂತೆ ಮೂವರು ನ್ಯಾಯಮೂರ್ತಿಗಳ ಪೂರ್ಣಪೀಠ ರಚಿಸಲಾಗಿತ್ತು. ಪೂರ್ಣಪೀಠದ ಮುಂದೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ನ ಘಟಾನುಘಟಿ ಹಿರಿಯ ವಕೀಲರು ವಾದ- ಪ್ರತಿವಾದ ಮಂಡಿಸಿದ್ದರು.ಹಲವು ಸಾಂವಿಧಾನಿಕ, ಧಾರ್ಮಿಕ ಹಾಗೂ