ಬೆಂಗಳೂರು : ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಿ ಹೋಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ಪ್ರಕಟಿಸಿದೆ. ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು.ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು.