ಬೆಂಗಳೂರು : ಹಿಜಬ್ ವಿಚಾರದಲ್ಲಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿಲುವು ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಕಿಡಿಕಾರಿದೆ.ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ, ಸಂವಿಧಾನವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣದ ಹಕ್ಕನ್ನು ನೀಡಿದೆ.ಆದರೆ ಈ ಹಕ್ಕನ್ನು ಕಸಿದಿರುವ ರಾಜ್ಯ ಸರ್ಕಾರದ ಅನ್ಯಾಯದ ಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ