ಬೆಂಗಳೂರು : ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಮಂಗಳವಾರ ಹಿಜಾಬ್ ವಿವಾದದ ಕುರಿತಾದ ತೀರ್ಪು ಪ್ರಕಟಿಸುವ ಕಲಾಪ ಆರಂಭಿಸಿದ ಎಂಟೇ ನಿಮಿಷದಲ್ಲಿ ತೀರ್ಪು ಪ್ರಕಟಿಸಿರುವುದು ವಿಶೇಷ.ತೀರ್ಪು ಪ್ರಕಟಿಸುವುದಕ್ಕೂ ಮುನ್ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರು, ಇಡೀ ವಿಷಯವನ್ನು ಸಮಗ್ರ ದೃಷ್ಟಿಕೋನದಿಂದ ಪರಿಶೀಲಿಸಿ ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ ಹಾಗೂ ಅದಕ್ಕೆ ಉತ್ತರಗಳನ್ನು ಉಲ್ಲೇಖಿಸಿದ್ದೇವೆ