ಶಿವಮೊಗ್ಗ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಿ ಎಂದು ಉಡುಪಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆದೇಶ ಕೊಟ್ಟಿದ್ದಾರೆ.ಹೈಕೋರ್ಟ್ನಲ್ಲಿ ಹಿಜಬ್ ತೀರ್ಪು ವಿಚಾರ ನಾಳೆ ಬಹಿರಂಗವಾಗಲಿದೆ. ಈ ಹಿನ್ನೆಲೆ ಶಾಲೆ-ಕಾಲೇಜುಗಳಲ್ಲಿ ಗಲಾಟೆಯಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಇಂದು ಸಂಜೆ ಈ ಆದೇಶವನ್ನು ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿಯೂ ಹಿಜಬ್ ಭಾರೀ ಸದ್ದು ಮಾಡಿರುವ