ಬೆಂಗಳೂರು : ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆಗೂ ಹಿಜಬ್ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಮತ್ತು ದ್ವೀತಿಯ ಪಿಯುಸಿಗೆ ಅನ್ವಯವಾಗುವ ನಿಯಮಗಳೇ ಸಿಇಟಿ ಪರೀಕ್ಷೆಗೂ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.ಜೂನ್ 16, 17 ಹಾಗೂ 18 ರಂದು ಈ ವರ್ಷದ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ.