ಬೆಂಗಳೂರು : ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲೇ ಮುಂಗಾರು ಮುಕ್ತಾಯವಾಗಿದೆ. ಆದರೆ, ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದಾಗಿ ಮಳೆ ಮುಂದುವರೆದಿತ್ತು. ಇದೀಗ 2 ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಆದರೆ, ನಾಳೆಯಿಂದ ಕರ್ನಾಟಕಕ್ಕೆ ಹಿಂಗಾರು ಪ್ರವೇಶವಾಗುವ ಹಿನ್ನೆಲೆಯಲ್ಲಿ ಮತ್ತೆ ಮಳೆಯಾಗಲಿದೆ. ಅ. 21ರಿಂದ 23ರವರೆಗೆ ರಾಜ್ಯದಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಅ. 21ರಿಂದ ಹಿಂಗಾರು