ಮಾಸ್ಕೋ : ಸ್ಪುಟ್ನಿಕ್-ವಿ ಲಸಿಕೆ ಕೋವಿಡ್-19 ರೂಪಾಂತರ ಓಮಿಕ್ರಾನ್ ಸೋಂಕಿನ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಎಂದು ರಷ್ಯಾ ತಿಳಿಸಿದೆ.ರಷ್ಯಾದ ಆರೋಗ್ಯ ಸಚಿವಾಲಯದ ಭಾಗವಾಗಿರುವ ಗಮಲೇಂಯ ಸಂಶೋಧನಾ ಸಂಸ್ಥೆ ಅಭಿವೃದ್ಧಿ ಪಡಿಸಿದ ಸ್ಪುಟ್ನಿಕ್-ವಿ ಓಮಿಕ್ರಾನ್ ವಿರುದ್ಧ ಹೋರಾಡುವಲ್ಲಿ ಹೆಚ್ಚಿನ ಪರಿಣಾಮ ತೋರುತ್ತಿರುವುದು ಕಂಡು ಬಂದಿದೆ. ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಸ್ಪುಟ್ನಿಕ್-ವಿ ಲಸಿಕೆ ಇತರ ಲಸಿಕೆಗಳಿಗಿಂತಲೂ ರೋಗಿಗಳಲ್ಲಿ ಮೂರರಿಂದ ಏಳು ಪಟ್ಟು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಹಾಗೆಯೇ ಶೇ.80 ರಷ್ಟು