ನವದೆಹಲಿ : ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.ದೇಶದ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಂದರೆ 2020ರ ಆಗಸ್ಟ್ 15ರಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವಾಗ ಈ ವಿಚಾರವನ್ನು ಪ್ರಸ್ತಾಪಿಸಿದ್ದರು.ಸದ್ಯ ಇರುವ ಕಾನೂನಿನ ಪ್ರಕಾರ, ನಿಗದಿಪಡಿಸಲಾಗಿರುವ ವಿವಾಹದ ವಯಸ್ಸು ಗಂಡುಮಕ್ಕಳಿಗೆ 21 ಹಾಗೂ ಹೆಣ್ಣುಮಕ್ಕಳಿಗೆ 18 ವರ್ಷ. ಈ ಹಿನ್ನೆಲೆಯಲ್ಲಿ ಹೊಸ ಯೋಜನೆಯನ್ನು