ಅಮರಾವತಿ : ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಗುರುವಾರ ತನ್ನ 2022-23ನೇ ಸಾಲಿನ ಬಜೆಟ್ ಮಂಡಿಸಿದೆ. ತಿರುಮಲದ ಪುರಾತನ ವೆಂಕಟೇಶ್ವರ ದೇವಾಲಯದ ಆಡಳಿತ ಮಂಡಳಿ 2022-23ರ ವಾರ್ಷಿಕ ಬಜೆಟ್ನಲ್ಲಿ 3,096.40 ಕೋಟಿ ರೂ. ಆದಾಯವನ್ನು ಅಂದಾಜಿಸಿದೆ.ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಬಜೆಟ್ ಸಭೆಯಲ್ಲಿ ಪರಿಶೀಲಿಸಿದ ಬಳಿಕ ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.