ಬೆಂಗಳೂರು : ಇತ್ತೀಚೆಗಷ್ಟೇ ಶಾಸಕ, ನಿರ್ಮಾಪಕ ಮುನಿರತ್ನ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಹುಚ್ಚ ವೆಂಕಟ್ ಅವರು ಇದೀಗ ಮುಂಬರುವ ಚುನಾವಣೆಯಲ್ಲಿ ಮುನಿರತ್ನ ಅವರ ವಿರುದ್ಧ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ ಹುಚ್ಚ ವೆಂಕಟ್ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ. ಚುನಾವಣೆಯ ಪ್ರಚಾರ ಕಾರ್ಯವನ್ನು 5 ದಿನಗಳಲ್ಲಿ ಆರಂಭಿಸುತ್ತೇನೆ, ಮತದಾರರು ಕೇವಲ ಕುಕ್ಕರ್ ಇತರೇ ಅಮಿಷಗಳಿಗೆ ಒಳಗಾಗಿ