ಚಿಕ್ಕಬಳ್ಳಾಪುರ : ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ಜನಸಾಮಾನ್ಯರು ಹೈರಾಣಾಗುವಂತಾಗಿದೆ. ಮತ್ತೊಂದೆಡೆ ಲಕ್ಷ ಲಕ್ಷ ಖರ್ಚು ಮಾಡಿ ರೈತರು ಬೆಳೆದ ಬೆಳೆಗಳ ಬೆಲೆ ಪಾತಾಳಕ್ಕಿಳಿಯುವಂತಾಗಿದೆ. ಲಕ್ಷ ಲಕ್ಷ ಖರ್ಚು ಮಾಡಿ ರೈತ ಬೆಳೆದ ಟೊಮೆಟೊ ಬೆಲೆ ಈಗ ಪಾತಾಳಕ್ಕಿಳಿದಿದ್ದು, ಅನ್ನದಾತ ಅಕ್ಷರಶಃ ನಲುಗಿ ಹೋಗುವಂತಾಗಿದೆ. ಒಂದು ಕೆಜಿ ಟೊಮೆಟೊ 1 ರೂ.ಗೂ ಕಡಿಮೆ ದರಕ್ಕೆ ಬಿಕರಿಯಾಗುತ್ತಿದ್ದು, ರೈತ ಸಾಲದ ಶೂಲಕ್ಕೆ ಸಿಲುಕುವಂತಾಗಿ ದಿಕ್ಕು