ಕೊಲಂಬೊ : ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿರುವ ಶ್ರೀಲಂಕಾಗೆ 2023ನೇ ಸಾಲಿನ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಮುದ್ರಣಕ್ಕೆ ಅಗತ್ಯ ನೆರವು ನೀಡಲು ಭಾರತ ಮುಂದಾಗಿದ್ದು, 4 ವರ್ಷಗಳಲ್ಲಿ 2.9 ಶತಕೋಟಿ ಡಾಲರ್ ನೆರವು ನೀಡಲಿದೆ.ಭಾರತೀಯ ಸಾಲ ಯೋಜನೆ ಅಡಿಯಲ್ಲಿ ಪಠ್ಯಪುಸ್ತಕ ಮುದ್ರಣಕ್ಕೆ ಅಗತ್ಯವಿರುವ ಕಾಗದ, ಶಾಯಿ ಸೇರಿದಂತೆ ಕಚ್ಚಾವಸ್ತುಗಳನ್ನು ಆಮದು ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುಸಿಲ್ ಪ್ರೇಮೇಜನಾಥ ತಿಳಿಸಿದ್ದಾರೆ.ಡಾಲರ್ ಕೊರತೆ ಇರುವುದರಿಂದ ಪಠ್ಯಪುಸ್ತಕಗಳ ಮುದ್ರಣಕ್ಕೆ ಅತ್ಯಂತ ಪ್ರಮುಖವಾಗಿ