ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್ಗೆ ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು