ಬೆಂಗಳೂರು : ಶೋಭಾ ಕರಂದ್ಲಾಜೆ ಅವರು ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗೆ ಇದೀಗ ಶೋಭಾ ಕರಂದ್ಲಾಜೆ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು, ನನ್ನ ಸಂಸದ ಸ್ಥಾನದ ಅವಧಿ ಇನ್ನೂ ಒಂದು ವರ್ಷಗಳ ಕಾಲವಿದೆ. ನಂತರ ಮುಂದಿನ ರಾಜಕೀಯ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಯಶವಂತಪುರ ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸುವೆ ಎಂಬ ಸುದ್ದಿ ಸುಳ್ಳು. ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಗೆ