ಬೆಂಗಳೂರು : ಈಚೆಗಷ್ಟೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ವಿಧಾನ ಪರಿಷತ್