ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಸಂಬಂಧ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಶೇ.7.5 ಕ್ಕೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂಬುದು ಎಸ್ಟಿ ಸಮುದಾಯವರ ಬೇಡಿಕೆಯಾಗಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್ಸಿ ಮತ್ತು ಎಸ್ಟಿಗೆ ಮೀಸಲಾತಿ ಹೆಚ್ಚಿಸಬೇಕೆಂದು